ದೇಶದಲ್ಲಿ ಕಾಂಗ್ರೆಸ್ ನಂ.1 ಭ್ರಷ್ಟ ಪಕ್ಷ : ಸಚಿವ ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ : ದೇಶದಲ್ಲಿ ಕಾಂಗ್ರೆಸ್ ನಂ.1 ಭ್ರಷ್ಟ ಪಕ್ಷವಾಗಿದ್ದು, ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಕದನ ಶುರುವಾಗಲಿದೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರ ಬಿಟ್ಟು ಹೊರಗೆ ಬರುವ ಪರಿಸ್ಥಿತಿ ಬಂದಿದೆ. ನಮ್ಮ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆ ಎಂದು ಹೇಳಿದ್ದಾರೆ.