ದೀಪಾವಳಿ ಹಬ್ಬದ ನಂತರ ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ
ನವದೆಹಲಿ, ನವೆಂಬರ್ 6: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ನ.6, ಶನಿವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಇಳಿಕೆ ಹಿನ್ನೆಲೆಯಲ್ಲಿ ವಿವಿಧ ನಗರಗಳಲ್ಲಿ ಇಂಧನ ದರ ಇಳಿಕೆಯಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟು ಪೆಟ್ರೋಲ್ ದರದಲ್ಲಿ 13 ರೂಪಾಯಿ, ಡೀಸೆಲ್ ದರದಲ್ಲಿ 19.56 ರೂಪಾಯಿ ಇಳಿಕೆ ಮಾಡಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಹಿನ್ನೆಲೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 86.67 ರೂಪಾಯಿ ದಾಖಲಾಗಿದೆ.ದೀಪಾವಳಿಯ ಮುನ್ನಾ ದಿನದಂದು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಕೆಲವೇ ಗಂಟೆಗಳ ನಂತರ ಹಲವಾರು ರಾಜ್ಯಗಳು ಕೂಡ ಇಂಧನ ಬೆಲೆ ಕಡಿತಗೊಳಿಸಿದವು. ರಾಜ್ಯಗಳು ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ಅನ್ನು ಮೂಲ ಬೆಲೆಯ ಮೇಲೆ ಮಾತ್ರವಲ್ಲದೇ ಕೇಂದ್ರವೂ ವಿಧಿಸುವ ಅಬಕಾರಿ ಸುಂಕದ ಮೇಲೂ ನಿರ್ಧರಿಸುವುದರಿಂದ ಹೆಚ್ಚು ವ್ಯಾಟ್ ಹೊಂದಿರುವ ರಾಜ್ಯಗಳಲ್ಲಿ ಕಡಿತವು ದೊಡ್ಡ ಮಟ್ಟದ್ದಾಗಿದೆ.ಸುಂಕ ಕಡಿತ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ, ಪುದುಚೇರಿ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್, ತ್ರಿಪುರಾ, ಅಸ್ಸಾಂ, ಸಿಕ್ಕಿಂ, ಬಿಹಾರ, ಮಧ್ಯಪ್ರದೇಶ, ಗೋವಾ, ಗುಜರಾತ್, ದಾದ್ರಾ ಮತ್ತು ಇತರ ರಾಜ್ಯಗಳಿವೆ. ಇದರೊಂದಿಗೆ ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ, ನಗರ ಹವೇಲಿ, ದಮನ್ ಮತ್ತು ದಿಯು, ಚಂಡೀಗಢ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಲಡಾಖ್ನಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿತವಾಗಿದೆ.ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 111.10 ರೂ.ಸುಂಕ ಕಡಿತದ ನಂತರವೂ, ಈಗ ರಾಜಸ್ಥಾನದ ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 111.10 ರೂ. ಆಗಿದೆ. ಮುಂಬೈನಲ್ಲಿ 109.98 ರೂ. ಮತ್ತು ಆಂಧ್ರಪ್ರದೇಶ 109.05 ರೂ. ದರವಿದೆ. ಮತ್ತೊಂದೆಡೆ, ಬಿಜೆಪಿ ಆಡಳಿತವಿರುವ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಿಂತ ಕಡಿಮೆಯಾಗಿದೆ. ಆದರೆ, ಮಧ್ಯಪ್ರದೇಶದಲ್ಲಿ 107.23 ರೂ., ಬಿಹಾರದಲ್ಲಿ 105.90 ರೂ. ದರ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 100.58 ರೂ.ಗಳಿದೆ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ