ದೇಶದ್ರೋಹಿ ಚಟುವಟಿಕೆ ನಿಲ್ಲಿಸಲು ಮತಾಂತರ ನಿಷೇಧ ಕಾನೂನು ಜಾರಿಗೆ ತರಲೇಬೇಕು : ಪ್ರಮೋದ ಮುತಾಲಿಕ್

ದೇಶದ್ರೋಹಿ ಚಟುವಟಿಕೆ ನಿಲ್ಲಿಸಲು ಮತಾಂತರ ನಿಷೇಧ ಕಾನೂನು ಜಾರಿಗೆ ತರಲೇಬೇಕು : ಪ್ರಮೋದ ಮುತಾಲಿಕ್

ಬಾಗಲಕೋಟೆ : ರಾಜ್ಯ ಸರ್ಕಾರವು ನಾಳೆ ಬೆಳಗಾವಿ ಅಧಿವೇಶನದಲ್ಲಿ ಮತಾಂತ ನಿಷೇಧ ಕಾಯ್ದೆ ಜಾರಿ ಮಾಡಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸ್ವಾಮೀಜಿಗಳೊಂದಿಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆಗಳನ್ನು ನಿಲ್ಲಿಸಲು ಮತಾಂತರ ನಿಷೇಧ ಕಾನೂನು ಜಾರಿಗೆ ತರಲೇಬೇಕು. ಇಲ್ಲದಿದ್ದರೇ ಸಿಎಂ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಘೇರಾವ್​ ಹಾಕುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.  ನಾಳೆಯಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳಿಗೆ ಸ್ವಾಮೀಜಿಗಳೊಂದಿಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.