ದೇಶವನ್ನು ಉದ್ದೇಶಿಸಿ ಪಿಎಂ ಮೋದಿ ಹೇಳಿದ್ದು ಏನು ಗೊತ್ತಾ ? ಇಲ್ಲಿದೆ ಹೈಲೆಟ್ಸ್

ದೇಶವನ್ನು ಉದ್ದೇಶಿಸಿ ಪಿಎಂ ಮೋದಿ ಹೇಳಿದ್ದು ಏನು ಗೊತ್ತಾ ? ಇಲ್ಲಿದೆ ಹೈಲೆಟ್ಸ್

ವದೆಹಲಿ : ಮೂರು ಕೃಷಿ ತಿದ್ದುಪಡಿ ಕಾಯ್ದೆ (Agricultural Amendment Act) ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi ಮಹತ್ವದ ಘೋಷಣೆ ಮಾಡಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ.

ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಆದ್ಯತೆ, ದೇಶದಲ್ಲಿ 100 ರಲ್ಲಿ 80 ರೈತರು ಸಣ್ಣ ಹಿಡುವಳಿ ರೈತರಾಗಿದ್ದಾರೆ. ದೇಶದಲ್ಲಿ 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಸಣ್ಣ ರೈತರ ಸಮಸ್ಯೆ ಬಗೆ ಹರಿಸಯಲು ಪ್ರಯತ್ನ ಮಾಡುತ್ತೇವೆ ಎಂದರು.

ಬಿತ್ತನೆ ಬೀಜ, ಮಾರುಕಟ್ಟೆ ಉಳಿತಾಯ ಯೋಜನೆ, ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ. ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಕೃಷಿ ಬಜೆಟ್ 5 ಪಟ್ಟು ಹೆಚ್ಚಿಸಿದ್ದೇವೆ. 22 ಕೋಟಿ ರೈತರಿಗೆ ಸಾಯಿಲ್ ಹೆಲ್ತ್ ಕಾರ್ಡ್ ವಿತರಿಸಿದ್ದೇವೆ ಎಂದು ಹೇಳಿದ್ದಾರೆ.

ಸಣ್ಣ ರೈತರ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕೃಷಿ ಕಾಯ್ದೆಗಳನ್ನು ಜಾರಿ ಮಾಡಲಾಗಿತ್ತು. ಆದರೆ ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.