ದೇಹದಲ್ಲಿ ಈ ಬದಲಾವಣೆ ಕಾಣಿಸಿಕೊಂಡರೆ ರಕ್ತದಲ್ಲಿ ಶುಗರ್ ಹೆಚ್ಚಾಗುತ್ತಿದೆ ಎಂದರ್ಥ

ಬೆಂಗಳೂರು : ನಮ್ಮ ಆರೋಗ್ಯದಲ್ಲಿ ಯಾವುದೇ ರೀತಿಯ ಏರು ಪೇರಾದರೂ ದೇಹ ಮೊದಲೇ ಸೂಚನೆಯನ್ನು ನೀಡುತ್ತದೆ. ಅದನ್ನು ನಾವು ಅರ್ಥ ಮಾಡಿಕೊಂಡರೆ ಆಗುವ ಅನಾಹುತವನ್ನು ತಪ್ಪಿಸಬಹುದು. ಮಧುಮೇಹ ಕೂಡಾ ಹಾಗೆಯೇ. ರಕ್ತದಲ್ಲಿ ಸಕ್ಕರೆಯ ಮಟ್ಟವು ಹೆಚ್ಚಾದಾಗ, ರೋಗಿಯ ದೇಹದಲ್ಲಿ ಕೆಲವು ಬದಲಾವಣೆಗಳು ಕಂಡು ಬರುತ್ತವೆ.
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಾಗ ದೇಹ ನೀಡುತ್ತದೆ ಈ ಸಂಕೇತ :
ಪಾದಗಳಲ್ಲಿ ಕಂಡುಬರುವ ಲಕ್ಷಣ :
ಮಧುಮೇಹ ಪಾದಗಳ ಮೇಲೆ ಎರಡು ರೀತಿಯಲ್ಲಿ ಪರಿಣಾಮ ಬೀರುತ್ತವೆ.ಪ್ರಮಾಣ ಹೆಚ್ಚಾದಾಗ ನರಮಂಡಲಕ್ಕೆ ಹಾನಿಯಾಗುತ್ತದೆ. ಇದರಿಂದ ರಕ್ತ ಪರಿಚಲನೆಯ ಮೇಲೆ ಕೂಡಾ ಪರಿಣಾಮ ಬೀರುತ್ತದೆ. ರೋಗಿಯ ನರಮಂಡಲಕ್ಕೆ ಹಾನಿಯಾದಾಗ ಯಾವುದೇ ಸಂವೇದನೆ ತಿಳಿಯುವುದಿಲ್ಲ. ರಕ್ತ ಪರಿಚಲನೆಯಲ್ಲಿ ತೊಂದರೆಯಾದರೆ, ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ. ಹೀಗಾದಾಗ ಸೋಂಕನ್ನು ಗುಣಪಡಿಸುವುದು ತುಂಬಾ ಕಷ್ಟಕರವಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ, ಅದು ಅಂಗಾಂಗಳನ್ನು ಸಂಪೂರ್ಣವಾಗಿ ಹಾಳುಮಾಡುತ್ತದೆ.