ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣ : ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಆಡುವಾಗ ನಡೆದ ಜಗಳದಲ್ಲಿ ಭರತ್, ಪ್ರತೀಕ್ ಎಂಬ ಇಬ್ಬರು ಯುವಕರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು
ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಬಳ್ಳಾಪುರ ಪೊಲೀಸರು, ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಗಲಾದ ವಿನಯ್ ತ್ರಿಮೂರ್ತಿ ಮೇಲೆ ಫೈರಿಂಗ್ ಮಾಡಿ ಪೊಲೀಸರು ಬಂಧಿಸಿದ್ದಾರೆ.