ಧಾರವಾಡ: ಎಸ್‌ಡಿಎಂನ ಎಲ್ಲ ಸೋಂಕಿತರು ಗುಣಮುಖ

ಎಸ್‌ಡಿಎಂ ಕಾಲೇಜಿನಲ್ಲಿ ಕಂಡು ಬಂದಿದ್ದ ಕೋವಿಡ್‌ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆರೋಗ್ಯವಾಗಿದ್ದಾರೆ. ಡಿ. 13ರಂದು ಧಾರವಾಡ ಜಿಲ್ಲೆಯಲ್ಲಿ ಕೇವಲ 2 ಕೋವಿಡ್‌ ಸೋಂಕಿತರು ಕಂಡುಬಂದಿದ್ದು, ಒಟ್ಟು 57 ಸಕ್ರಿಯ ಪ್ರಕರಣಗಳು ಇವೆ

ಧಾರವಾಡ: ಎಸ್‌ಡಿಎಂನ ಎಲ್ಲ ಸೋಂಕಿತರು ಗುಣಮುಖ
ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜ್‌ ಮತ್ತು ಆಸ್ಪತ್ರೆಯ 306 ಸಂಪೂರ್ಣ ಗುಣಮುಖರಾಗಿದ್ದು, ಈಗ ಅಲ್ಲಿ ಯಾವುದೇ ಸಕ್ರಿಯ ಕೋವಿಡ್‌ ಪ್ರಕರಣಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಎಸ್‌ಡಿಎಂ ಕಾಲೇಜಿನಲ್ಲಿ ಕಂಡು ಬಂದಿದ್ದ ಕೋವಿಡ್‌ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆರೋಗ್ಯವಾಗಿದ್ದಾರೆ. ಡಿ. 13ರಂದು ಜಿಲ್ಲೆಯಲ್ಲಿ ಕೇವಲ 2 ಕೋವಿಡ್‌ ಸೋಂಕಿತರು ಕಂಡುಬಂದಿದ್ದು, ಒಟ್ಟು 57 ಸಕ್ರಿಯ ಪ್ರಕರಣಗಳು ಇವೆ'' ಎಂದರು. '' ಜಿಲ್ಲೆಯಲ್ಲಿ ಕೋವಿಡ್‌ ರೋಗ ನಿರೋಧಕ ಲಸಿಕಾಕರಣ ಉತ್ತಮವಾಗಿ ಸಾಗಿದ್ದು, ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ನಗರ ಹಾಗೂ ಗ್ರಾಮೀಣ ಸೇರಿದಂತೆ ಶೇ. 97 ರಷ್ಟು ಮೊದಲ ಡೋಸ್‌ ಲಸಿಕಾಕರಣ ಮಾಡಲಾಗಿದೆ. 2ನೇ ಡೋಸ್‌ ಲಸಿಕಾಕರಣ ಸಹ ಪ್ರಗತಿಯಲ್ಲಿದೆ. ಪ್ರತಿದಿನ ಸುಮಾರು 250 ತಂಡಗಳಿಂದ ಎಲ್ಲ ಸರಕಾರಿ ಆಸ್ಪತ್ರೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಲಸಿಕಾಕರಣ ಮಾಡಲಾಗುತ್ತಿದೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ'' ಎಂದರು. ವಿದೇಶದಿಂದ ಬಂದ ಓರ್ವ ವ್ಯಕ್ತಿ ''ವಿಶ್ವ ಆರೋಗ್ಯ ಸಂಸ್ಥೆಯು ಗುರುತಿಸಿರುವ ಹೈರಿಸ್ಕ್‌ ಹೊಂದಿರುವ ಮತ್ತು ಅಡ್ವೈಸರಿ ಇರುವ 14 ರಾಷ್ಟ್ರಗಳಿಂದ ಯಾವುದೇ ವ್ಯಕ್ತಿಗಳು ಜಿಲ್ಲೆಗೆ ಬಂದಿರುವುದಿಲ್ಲ. ಆದರೆ ಹೈರಿಸ್ಕ್‌ ಹೊಂದಿರದ ಹೊರರಾಷ್ಟ್ರದಿಂದ ಓರ್ವ ವ್ಯಕ್ತಿ ಜಿಲ್ಲೆಗೆ ಆಗಮಿಸಿದ್ದು, ಅವರಿಗೆ ಕೋವಿಡ್‌ ಮಾರ್ಗಸೂಚಿಗಳ ಪ್ರಕಾರ ಟೆಸ್ಟಿಂಗ್‌ ಮಾಡಿ ಪ್ರತ್ಯೇಕವಾಗಿ ಇಡಲಾಗಿದೆ. ಅವರಲ್ಲಿ ಸೋಂಕು ಕಂಡು ಬಂದಿದ್ದು, ಹೋಂ ಐಸೋಲೇಷನ್‌ನಲ್ಲಿಇದ್ದಾರೆ'' ಎಂದು ಜಿಲ್ಲಾಕಾರಿ ತಿಳಿಸಿದರು. ಕೊರೊನಾ ಸಂಭಾವ್ಯ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ, ಕೋವಿಡ್‌ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ಇಳಿಸಬೇಕಾಗಿದೆ. ಆದರೂ ಜನತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಸರಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲೇಬೇಕಿದೆ. ಮಾಸ್ಕ್‌ ಧರಿಸುವುದು ರೂಢಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್‌ ಸಂಪೂರ್ಣ ನಿಯಂತ್ರಣದಲ್ಲಿದೆ. ಸಂಭಾವ್ಯ ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಓಮಿಕ್ರಾನ್‌ ರೂಪಾಂತರಿ ತಳಿಯ ಬಗ್ಗೆಯೂ ಮುಂಜಾಗ್ರತೆ ವಹಿಸಲಾಗುತ್ತಿದೆ. ಕೋವಿಡ್‌ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ತಲುಪಿದೆ. ಆದರೂ ಜನತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಸರಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲೇಬೇಕಿದೆ. ಮಾಸ್ಕ ಧರಿಸುವುದು ರೂಢಿ ಮಾಡಿಕೊಳ್ಳಬೇಕು. ಲಸಿಕೆ ನೀಡಿಕೆ ಪ್ರಮಾಣವನ್ನೂ ಹೆಚ್ಚಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.