ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ: ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗುಡುಗು

ಬೆಂಗಳೂರು: ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ( Congress and BJP Party ) ಜನರ ಮನಸ್ಸನ್ನು ಕೆಡಿಸುತ್ತವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಟೀಕಾ ಪ್ರಹಾರ ನಡೆಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಲ್ಲಾ ಅರಿವಿದ್ದರೂ ಜನರ ಸಮಸ್ಯೆ ಕೇಳಲು ಯಾರೂ ತಯಾರಿಲ್ಲ. ನಾನು ಹೊಡೆದಂಗೆ ಮಾಡ್ತೀನಿ, ನೀನು ಅತ್ತಂಗೆ ಮಾಡು ಎನ್ನುವಂಥ ನೀತಿ ಅನುಸರಿಸುತ್ತಿವೆ. ಇವರ ಯೋಗ್ಯತೆ ಏನು ಎನ್ನುವುದು ಜನರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಬಸವನಗುಡಿ ಕ್ಷೇತ್ರದಲ್ಲಿ ಹೆಚ್ಡಿಕೆ ಯಾತ್ರೆ
ಇದಾದ ನಂತರ ಕ್ಷೇತ್ರದ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ತೆರೆದ ವಾಹನದಲ್ಲಿ ಮಾಜಿ ಮುಖ್ಯಮಂತ್ರಿಗಳು ಮೆರವಣಿಗೆ ಸಾಗಿದರು. ಎನ್ ಆರ್ ಕಾಲೊನಿ, ಹನುಮಂತ ನಗರ, ಶ್ರೀನಗರ ಬಸ್ ನಿಲ್ದಾಣ, ಪಿಇ ಎಸ್ ಕಾಲೇಜು, ಹನುಮಂತನಗರ ಮುಖ್ಯರಸ್ತೆ, ಸೀತಾ ಸರ್ಕಲ್ ವರೆಗೆ ಸುಮಾರು 8 ಕಿ.ಮೀ. ದೂರ ಕ್ರಮಿಸಿದರು.
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನುಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಹಿಂದೂ ಪದ ಅಶ್ಲೀಲ ಎಂದು ಶಾಸಕ ಸತೀಶ್ ಜಾರಕಿಹೊಳಿ ( MLA Satish Jarkiholi ) ಅವರು ನೀಡಿರುವ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೂಕ್ಷ್ಮ ವಿಚಾರ ಇಟ್ಟುಕೊಂಡು ಚುನಾವಣಾ ರಾಜಕೀಯ ಮಾಡುತ್ತಿವೆ. ಇದು ಸರಿಯಲ್ಲ ಎಂದರು.
ಬಸವನಗುಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಇಂದಿನಿಂದ ಮನೆ ಮನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪಕ್ಷದ ಮುಖಂಡ ಬಾಗೇಗೌಡ ಹಾಗೂ ವಿಧಾನ ಪರಿಷತ್ ಸದಶ್ಯ ಟಿ.ಎ. ಶರವಣ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಮ್ಮ ಪಕ್ಷದ ಅಭ್ಯರ್ಥಿ ಅರಮನೆ ಶಂಕರ್ ಗೆಲುವಿಗೆ ಎಲ್ಲರೂ ಕೆಲಸ ಮಾಡುತ್ತಾರೆ ಎಂದರು ಮಾಜಿ ಮುಖ್ಯಮಂತ್ರಿ ಅವರು.
ಸೀತಾ ಸರ್ಕಲ್ ಬಳಿ ನೂತನವಾಗಿ ಸ್ಥಾಪಿಸಲಾಗಿರುವ ಜೆಡಿಎಸ್ ಕಚೇರಿಯನ್ನು ಮಾಜಿ ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು