ಧರ್ಮಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಮಂತ್ರಾಲಯ & ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಪ್ರಯುಕ್ತ ಇಂದು (ನ.22) ಸರ್ವಧರ್ಮ 90ನೇ ಅಧಿವೇಶನ ಉದ್ಘಾಟಿಸಲಿರುವ ಸ್ಮೃತಿ ಇರಾನಿ ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ಧರ್ಮಸ್ಥಳಕ್ಕೆ ತೆರಳಿದರು.