ಧಾರವಾಡ ಜಿಲ್ಲೆಯಲ್ಲಿ ಮಳೆಯ ಆರ್ಭಟ : ಹೆಬ್ಬಸೂರು ಗ್ರಾಮದ ಶಾಲೆಗಳಿಗೆ ನುಗ್ಗಿದ ನೀರು

ಧಾರವಾಡ : ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯ ಆರ್ಭಟ ಹೆಚ್ಚಾಗಿದ್ದು, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಇನ್ನು ನಿನ್ನೆ ಸುರಿದ ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ನೆಲಕ್ಕೂರುಳಿದೆ.