ಧಾರವಾಡ-ಹೆಬಸೂರು ಕಳಪೆ ರಸ್ತೆ ಕಾಮಗಾರಿಗೆ ವಿರೋಧ

ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಹಲವಾರು ರಸ್ತೆಗಳು ಹಾಳಾಗಿದ್ದು, ಧಾರವಾಡದಿಂದ ಹೆಬಸೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ದುರಸ್ತಿ ಕೆಲಸವನ್ನು ತೀರಾ ಕಳಪೆ ಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಪರಮೇಶ್ ಕಾಳೆ ಎಂಬುವರು, ಹಾಳಾಗಿರುವ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಲಾಗುತ್ತಿದೆ. ಈ ಮೂಲಕ ತೀರಾ ಕಳಪೆ ರೀತಿಯಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ, ಗುತ್ತಿಗೆದಾರರಿಂದ ರಸ್ತೆ ಕಾಮಗಾರಿಯನ್ನು ನಿಲ್ಲಿಸಿದ ಪರಮೇಶ್ ಕಾಳೆ, ಸಂಪೂರ್ಣ ಉತ್ತಮ ಗುಣಮಟ್ಟದಲ್ಲಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.