ಧಾರವಾಡದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಮೇಲೆ ಪೊಲೀಸರ ದರ್ಪ

ಧಾರವಾಡದಲ್ಲಿ  ಬೀದಿ ಬದಿ ವ್ಯಾಪಾರಸ್ಥರ ಮೇಲೆ ಪೊಲೀಸರ ದರ್ಪ

ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ವೇಳೆ, ವ್ಯಾಪಾರಸ್ಥರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಸೂಪರ್ ಮಾರ್ಕೆಟ್ ನಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆ ವಿರೋಧಿಸಿ, ನ್ಯಾಯಯುತ ಹಕ್ಕಿಗಾಗಿ  ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ.

ಈ ವೇಳೆ ಪ್ರತ್ಯೇಕ ಜಾಗೆ ನೀಡಿ ತೆರವು ಕಾರ್ಯಾಚರಣೆ ನಡೆಸಬೇಕು. ಈ ಕುರಿತು ಸರ್ವೋಚ್ಚ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದ ವಕೀಲ, ಚೌದರಿ ಅವರ ಕಾಲರ್ ಹಿಡಿದು ಪೊಲೀಸರು
ಎಳೆದೊಯ್ದರು.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

9 ಲೈವ್ ನ್ಯೂಸ್ ಧಾರವಾಡ