ಧಾರವಾಡದಲ್ಲಿ ಎನ್ಪಿಎಸ್ ಮರು ಜಾರಿಗೆ ಒತ್ತಾಯ.. ಪ್ರತಿಭಟನೆಗೆ ಹೊರಟ್ಟಿ ಸಾಥ್

ಧಾರವಾಡದಲ್ಲಿ ; ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವತಿಯಿಂದ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಧಾರವಾಡ : ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಧಾರವಾಡ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಪ್ರತಿಭಟನೆ ಮಾಡಿದ್ದಾಗ ಡಿ ಕೆ ಶಿವಕುಮಾರ್ ಅವರು ಹಳೆಯ ಪಿಂಚಣಿ ಪದ್ಧತಿ ಜಾರಿಗೆ ತರುವ ಬಗ್ಗೆ ಮಾತನಾಡಿದ್ದರು. ಆದ್ರೆ, ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ವಿಧಾನ ಪರಿಷತ್ ಸದಸ್ಯರೆಲ್ಲರೂ ಸೇರಿ ಶಿಕ್ಷಣ ಸಚಿವರ ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಯನ್ನು ಭೇಟಿ ಮಾಡಿದ್ದೇವೆ. ಜೊತೆಗೆ ಈ ಕುರಿತು ಸಿಎಂಗೆ ಕೂಡ ಹೇಳಿದ್ದೇನೆ ಎಂದರು.ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ಸರ್ಕಾರಿ ನೌಕರರ ಈ ಹೋರಾಟ ನ್ಯಾಯವಾಗಿದೆ ಮತ್ತು ಪ್ರತಿಭಟನಾಕಾರರ ಬೇಡಿಕೆ ಯೋಗ್ಯವಾಗಿದೆ. ಹೀಗಾಗಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಒತ್ತಾಯ ಮಾಡುತ್ತೇನೆ. ಯಾರಿಗಾದರೂ ಅನ್ಯಾಯ ಆದರೆ ಅವರ ಪರ ನ್ಯಾಯಕ್ಕಾಗಿ ನಾನು ಇರುತ್ತೇನೆ ಎಂದರು.