ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆ ಗೆಲುವು

ಧಾರವಾಡ: ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದಂತ ಕಾಂಗ್ರೆಸ್ ನ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿ ಅಭ್ಯರ್ಥಿಯ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಧಾರವಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಿಷತ್ ಚುನಾವಣೆಯಲ್ಲಿ ಬಿಗ್ ಫೈಟ್ ನಡೆದಿತ್ತು.
ಅಂದಹಾಗೇ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಹೆಚ್ಚಿನ ಮತ ಪಡೆದು ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪರಿಷತ್ ಫೈಟ್ ನಲ್ಲಿ ಕಾಂಗ್ರೆಸ್ 10 ಸ್ಥಾನಗಳನ್ನು ಗೆಲ್ಲುವಂತೆ ಆಗಿದೆ.