ನ. 11 ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ : ಸಿದ್ದತೆ ವೀಕ್ಷಿಸಿದ ಸಚಿವರು

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಹಿನ್ನೆಲೆ ಬೆಂಗಳೂರಿನಲ್ಲಿ ಸಚಿವರುಗಳು ಸಿದ್ದತೆ ವೀಕ್ಷಿಸಿದರು. ಬೆಂಗಳೂರು ಸಂಚಾರಿ ಪೊಲೀಸ್ ಆಯುಕ್ತ, ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಕಾರ್ಯಕ್ರಮದ ಕುರಿತು ಮಾಹಿತಿ ಪಡೆದರು.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್, ಅಶ್ವಥ್ ನಾರಾಯಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆ ವೀಕ್ಷಣೆ ಮಾಡಿದರು