ರೈತ ಸಮುದಾಯಕ್ಕೆ ಸಿಹಿಸುದ್ದಿ : ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ, ದೀರ್ಘಾವಧಿ ಸಾಲ ಸೌಲಭ್ಯ : ಸಚಿವ ಎಸ್.ಟಿ. ಸೋಮಶೇಖರ್
ನಂಜನಗೂಡು : ರೈತ (Farmer) ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ (Minister S.T. SomaShekhar) ಹೇಳಿದ್ದಾರೆ.ನಂಜುಂಡೇಶ್ವರ ದೇವಾಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203. 52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.