ನಂದಿಗಿರಿಧಾಮ ರೋಪ್‌ ವೇ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ

ನಂದಿಗಿರಿಧಾಮ ರೋಪ್‌ ವೇ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ

ಚಿಕ್ಕಬಳ್ಳಾಪುರ: ನಂದಿಗಿರಿಧಾಮ ರೋಪ್‌ ವೇಗೆ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸುಮಾರು 94 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿಗಿರಿಧಾಮ ರೋಪ್‌ ವೇ ಶಂಕು ಸ್ಥಾಪನೆ ಮಾಡಿದ್ದಾರೆ.

800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡವನ್ನ ಉದ್ಘಾಟಿಸಿದ್ದಾರೆ.

ಈ ವೇಳೆ ಸಿಎಂ ಬೊಮ್ಮಾಯಿಯವರಿಗೆ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಸಾಥ್ ನೀಡಿದ್ದು, ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ಸೋಲಾಲಪ್ಪನ ದಿನ್ನೆಯಲ್ಲಿ ಅವಳಿ ಜಿಲ್ಲೆಗಳ ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ.

ವಿಶ್ವವಿಖ್ಯಾತ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲಾಗಿದೆ. ದಿವಂಗತ ನಟ ಶಂಕರ್​ನಾಗ್ ಅಂದಿನ ಕಾಲದಲ್ಲಿ ಗಿರಿಧಾಮಕ್ಕೆ ರೋಪ್ ವೇ ಮಾಡುವ ಕನಸು ಕಂಡಿದ್ದರು. ಆದರೆ ಇದುವರೆಗೂ ಅಂತಿಮ ರೂಪಕ್ಕೆ ಬಂದಿರಲಿಲ್ಲವಾಗಿತ್ತು. ಆದರೀಗ ರಾಜ್ಯ ಸರ್ಕಾರ 94 ಕೋಟಿ ರೂಪಾಯಿಗಳ ಅನುದಾನದಲ್ಲಿ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗಿರಿಧಾಮಕ್ಕೆ ಆಗಮಿಸಿ ಇಂದು ಶಂಕು ಸ್ಥಾಪನೆ ಮಾಡಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಸುಮಾರು 800 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಅದನ್ನ ಸಿಎಂ ಬಸವರಾಜ ಬೊಮ್ಮಾಯಿಯವರು ಉದ್ಘಾಟನೆ ಮಾಡಿದ್ದಾರೆ. ಇದರ ಜೊತೆಗೆ ಚಿಕ್ಕಬಳ್ಳಾಪುರ ತಾಲೂಕಿನ ಸೊಲಾಲಪ್ಪನ ದಿನ್ನೆಯಲ್ಲಿ ಅವಳಿ ಜಿಲ್ಲೆಗಳ ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ.