ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ನಗರ/ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗವಿಕಲರ ಸಮಸ್ಯೆಗಳು ಮತ್ತು ಅಗತ್ಯಗಳನ್ನು ಅರಿತುಕೊಂಡು, ಅಂಗವಿಕಲರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲ ಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲಾಗುತ್ತಿದೆ.

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಿಸಲು ಗ್ರಾಮ ಪಂಚಾಯತ್ ಮತ್ತು ಪುರಸಭೆಯ ವಿವರಗಳು:ನೆಲಮಂಗಲ: ನರಸೀಪುರ, ಅರೆಬೊಮ್ಮನಹಳ್ಳಿ,, ಹೊಸಕೋಟೆ: ಪುರಸಭೆ (ನಗರ ಪುನರ್ವಸತಿ ಕಾರ್ಯಕರ್ತರು +2), ದೇವನಗೊಂದಿ ಶಿವನಪುರ.ಅರ್ಹ ಅಂಗವಿಕಲರು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರಿಗೆ ಜನವರಿ 31, 2023 ರೊಳಗೆ ಸಲ್ಲಿಸಬೇಕು.ಅರ್ಹತೆಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು. ಸಂಖ್ಯೆ:080-2787441 ಇಮೇಲ್ ವಿಳಾಸ: . ವಿಕಲಚೇತನರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲ್ಯಾಣ ಅಧಿಕಾರಿ ಜಗದೀಶ್ ಅವರನ್ನು ಸಂಪರ್ಕಿಸಬಹುದಾಗಿದೆ.