ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸುದೀಪ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಸೇರ್ಪಡೆ ವಿಚಾರದ ಕುರಿತಂತೆ ಪಕ್ಷದೊಳಗೆ ಚರ್ಚೆ ಆಗುತ್ತಿದ್ದು, ಶೀಘ್ರವೇ ಈ ಬಗ್ಗೆ ಅಧಿಕೃತವಾಗಿ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಟ ಸುದೀಪ್ ಅವರು ಇಂದು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇಂದು ಮಧ್ಯಾಹ್ನ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.