ನಟ ನಿಖಿಲ್ ಕುಮಾರಸ್ವಾಮಿ ನಟನೆಯ ''ರೈಡರ್''ಸಿನಿಮಾ ರಿಲೀಸ್

ನಟ ನಿಖಿಲ್ ಕುಮಾರಸ್ವಾಮಿ ನಟನೆಯ ''ರೈಡರ್''ಸಿನಿಮಾ ರಿಲೀಸ್

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ರೈಡರ್ ಸಿನಿಮಾ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಅಭಿನಯದ ಸಿನಿಮಾ ಇದಾಗಿದೆ. ಬೆಂಗಳೂರಿನ ಆನಂದರಾವ್ ವೃತ್ತದಿಂದ ಅನುಪಮ ಚಿತ್ರಮಂದಿರಕ್ಕೆ ಮೆರವಣಿಗೆ ಮೂಲಕ ನಿಖಿಲ್ ಹೋಗಲಿದ್ದಾರೆ.

ಅಲ್ಲದೇ ಆನಂದ್ ರಾವ್ ವೃತ್ತದಲ್ಲಿರುವ ಭವಹರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಚಿತ್ರಮಂದಿರಕ್ಕೆ ಬರಲಿದ್ದು, ಅನುಪಮ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ನಿಖಿಲ್ ಚಿತ್ರ ನೋಡಲಿದ್ದಾರೆ. ನಂತರ ಮಧ್ಯಾಹ್ನದ ನಂತರ ಬೆಂಗಳೂರಿನ ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ.