ನಟ ಸುದೀಪ್ ಮನೆಗೆ ಹೋಗಿ 'ವಾಲ್ಮೀಕಿ ಜಾತ್ರೆ'ಗೆ ಆಹ್ವಾನ : ಫೋಟೋ ವೈರಲ್

ನಟ ಸುದೀಪ್ ಮನೆಗೆ ಹೋಗಿ 'ವಾಲ್ಮೀಕಿ ಜಾತ್ರೆ'ಗೆ ಆಹ್ವಾನ : ಫೋಟೋ ವೈರಲ್

ದಾವಣಗೆರೆ : ಜಿಲ್ಲೆಯ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಆಗಮನ ವಿಳಂಬವಾಗಿದ್ದಕ್ಕೆ ನಿನ್ನೆ ಕಿಚ್ಚ ಸುದೀಪ್ ಅಭಿಮಾನಿಗಳು ದಾಂಧಲೆ ನಡೆಸಿ ನೂರಾರು ಕುರ್ಚಿ ಮುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಟ ಸುದೀಪ್ ಟ್ವೀಟ್ ಮಾಡಿದ್ದು, ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದರ ನಡುವೆ ಜಾತ್ರೆ ಸಮಿತಿ ಸದಸ್ಯರಾದ ರಂಗನಾಥ್ ಕೆ.ಎಂ ಎನ್ನುವವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶ್ರೀಗಳು ಹಾಗೂ ಜಾತ್ರಾ ಸಮಿತಿಯವರು ಕಿಚ್ಚ ಸುದೀಪ್ ಅವರಿಗೆ ಆಹ್ವಾನ ನೀಡಲು ಸುದೀಪ್ ಮನೆಗೆ ಹೋಗಿದ್ದರು. ಆದರೆ ಅವರು ಮನೆಯಲ್ಲಿ ಇರಲಿಲ್ಲ, ಅವರ ತಂದೆ ಸರೋವರ್ ಸಂಜೀವ್ ಇದ್ದರು. ಅವರಿಗೆ ಈ ವಿಷಯ ತಿಳಿಸಿ ಆಹ್ವಾನ ನೀಡಿದ್ದಾರೆ ಎಂದಿದ್ದಾರೆ. ಈ ಸಂಬಂಧ ಕೆಲವು ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.

ಸುದೀಪ್ ಹೇಳಿದ್ದೇನು..?
ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ . ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ.ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ ..ಮುಂದೆ ಖಂಡಿತ ಬರುವೆ.ಪ್ರೀತಿ ಇರಲಿ.ಶಾಂತರೀತಿಯಿಂದ ವರ್ತಿಸಿ . ಪ್ರೀತಿಯೊಂದಿಗೆ ನಿಮ್ಮ ಕಿಚ್ಚ.. ಎಂದು ಟ್ವೀಟ್ ಮಾಡಿದ್ದಾರೆ.
ಸುದೀಪ್ ಬರಲಿಲ್ಲ ಎಂದು ರೊಚ್ಚಿಗೆದ್ದ ಅಭಿಮಾನಿಗಳು ನಿನ್ನೆ ನೂರಾರು ಕುರ್ಚಿ ಮುರಿದು ದಾಂಧಲೆ ನಡೆಸಿದ್ದಾರೆ. ಅಲ್ಲದೇ ಕಿಚ್ಚ ಕಿಚ್ಚ ಎಂದು ಜೋರಾಗಿ ಘೋಷಣೆ ಕೂಗಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕೊನೆಗೂ ಸುದೀಪ್ ಬರಲಿಲ್ಲ. ನೆಚ್ಚಿನ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದರು.