ನಾಡಹಬ್ಬ ದಸರಾ ಮಹೋತ್ಸವ: ಸಭೆ ಇಂದು

ನಾಡಹಬ್ಬ ದಸರಾ ಮಹೋತ್ಸವ: ಸಭೆ ಇಂದು

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಬಗ್ಗೆ ಪೂರ್ವಭಾವಿಯಾಗಿ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯು ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿದೆ.

ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್, ಮೈಸೂರು ಭಾಗದ ಸಂಸದರು, ಶಾಸಕರು ಹಾಗೂ ಜಿಲ್ಲಾಧಿಕಾರಿ ಪಾಲ್ಗೊಳ್ಳಲಿದ್ದಾರೆ.

ಈ ಬಾರಿ ದಸರೆಯು ಅ.7ರಿಂದ 15ವರೆಗೆ ನಡೆಯಲಿದ್ದು, ಪೂರ್ವಸಿದ್ಧತೆ ಆರಂಭವಾಗಿಲ್ಲ. ಕೋವಿಡ್‌ ಮೂರನೇ ಅಲೆ ಕಾರಣ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕ ದಸರೆ ಬಗ್ಗೆಯೇ ಜನಪ್ರತಿನಿಧಿಗಳು ಒಲವು ತೋರಿದ್ದಾರೆ.

ಉನ್ನತ ಮಟ್ಟದ ಸಮಿತಿಯು ನಾಡಹಬ್ಬದ ಆಚರಣೆ ಬಗ್ಗೆ ತಜ್ಞರ ಸಲಹೆ ಕೇಳುವ ನಿರೀಕ್ಷೆ ಇದೆ. ಕಳೆದ ಬಾರಿಯೂ ದಸರೆ ಸರಳವಾಗಿತ್ತು.