ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಕುತೂಹಲ ಮೂಡಿಸಿದ ನಟ ಸುದೀಪ್ ಹೇಳಿಕೆ

ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ  ಕುತೂಹಲ ಮೂಡಿಸಿದ ನಟ ಸುದೀಪ್ ಹೇಳಿಕೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಸುದೀಪ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ.

ಈ ವಿಚಾರವನ್ನು ಸ್ವತಃ ಸುದೀಪ್ ಅವರೇ ಒಪ್ಪಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಗಳಲ್ಲಿ ಆಪ್ತರಿದ್ದಾರೆ. ಹೀಗಾಗಿ, ಅವರು ಯಾವ ಪಕ್ಷ ಸೇರುತ್ತಾರೆ ಅನ್ನೋದು ಸದ್ಯದ ಕುತೂಹಲವಾಗಿದೆ.

ಸುದೀಪ್ ರಾಜಕೀಯಕ್ಕೆ ಬರಬಾರದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಸುದೀಪ್ ರಾಜಕೀಯಕ್ಕೆ ಬರಬೇಕು ಎಂದು ಆಸೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಗಳಲ್ಲಿ ಆಪ್ತರಿದ್ದಾರೆ. ಆ ಎರಡು ಪಕ್ಷಕ್ಕಿಂತ ನನಗೆ ಮೂರನೇ ಪಕ್ಷ (ಜನರ ಪಕ್ಷ) ಮುಖ್ಯ' ಎಂದಿದ್ದಾರೆ ನಟ ಸುದೀಪ್. ಅಂದರೆ ನನಗೆ ರಾಜಕೀಯಕ್ಕಿಂತ ಜನರೇ ಮುಖ್ಯ ಎಂದು ನಟ ಸುದೀಪ್ ಹೇಳಿದ್ದಾರೆ. ಈ ಮೂಲಕ ನಟ ಸುದೀಪ್ ಸದ್ಯಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡಲ್ಲ ಎಂಬುದಾಗಿ ಹೇಳಿದ್ದಾರೆ.

ಇತ್ತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ನಟ ಸುದೀಪ್ ಕಾಂಗ್ರೆಸ್ ಗೆ ಸೇರುವಂತೆ ರಮ್ಯಾ ಮೂಲಕ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಸುದೀಪ್ ಮತ್ತು ರಮ್ಯಾ ಒಳ್ಳೆಯ ಸ್ನೇಹಿತರಾಗಿದ್ದು, ರಮ್ಯಾ ಮೂಲಕ ಸುದೀಪ್ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.