ನನ್ನ ಕನಸಿನ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿರುವುದು ಹೆಮ್ಮೆ ತಂದಿದೆ : ಎಂ.ಬಿ ಪಾಟೀಲ್ ಟ್ವೀಟ್

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ 2014ರಲ್ಲಿ ಪ್ರಾರಂಭಿಸಿ 2017ರಲ್ಲಿ ಕಾರ್ಯರೂಪಗೊಳಿಸಿದ ನನ್ನ ಕನಸಿನ #SCADA in #NLBC Modernization (Phase-1) ಸ್ಕ್ವಾಡಾ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದು ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.
SCADA-Phase2 ಕೂಡ ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾರಂಭಿಸಿದ್ದು! ಬಿಜೆಪಿ ಸರ್ಕಾರ ಯಾವುದೇ ನಿರ್ಣಾಯಕ ಅಭಿವೃದ್ಧಿ ಮಾಡದಿದ್ದರೂ ಹಿಂದಿನ ಸರ್ಕಾರದ ಕೆಲಸಗಳಿಗೆ ಮೈಲೇಜ್ ಪಡೆಯಲು ಹಿಂಜರಿಯುವುದಿಲ್ಲ! ಎಂದು ಎಂಬಿ ಪಾಟೀಲ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.