ನನ್ನ ತಾತ ಬ್ರಿಟಿಷರ ಬಳಿ ಕ್ಷಮೆಯಾಚಿಸಿದ್ದನ್ನು ಸಾಬೀತುಪಡಿಸಿʼ: ʻರಾಗಾʼಗೆ ಸಾವರ್ಕರ್‌ ಮೊಮ್ಮಗ ಸವಾಲು

ನನ್ನ ತಾತ ಬ್ರಿಟಿಷರ ಬಳಿ ಕ್ಷಮೆಯಾಚಿಸಿದ್ದನ್ನು ಸಾಬೀತುಪಡಿಸಿʼ: ʻರಾಗಾʼಗೆ ಸಾವರ್ಕರ್‌ ಮೊಮ್ಮಗ ಸವಾಲು

ಮುಂಬೈ: ಹಿಂದುತ್ವ ಸಿದ್ಧಾಂತವಾದಿ ದಿವಂಗತ ವಿಡಿ ಸಾವರ್ಕರ್ ಅವರ ಮೊಮ್ಮಗ ರಾಹುಲ್ ಗಾಂಧಿ ಅವರ ಹೇಳಿಕೆಗಾಗಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ನನ್ನ ತಾತ ಬ್ರಿಟಿಷರ ಬಳಿ ಕ್ಷಮೆಯಾಚಿಸಿದ ದಾಖಲೆಗಳನ್ನು ತೋರಿಸುವಂತೆ ರಾಹುಲ್‌ ಗಾಂಧಿಗೆ ಸವಾಲು ಹಾಕಿದ್ದಾರೆ.

'ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ ಮತ್ತು ಗಾಂಧಿ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ' ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿಯಿಂದ ಕಿಡಿಕಾರಿದೆ.

ಲೋಕಸಭೆಯಿಂದ ಅನರ್ಹಗೊಂಡ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಇಂತಹ ಹೇಳಿಕೆಗಳನ್ನು ಬಾಲಿಶ ಎಂದು ಕರೆದಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಸೋಮವಾರ, 'ರಾಹುಲ್ ಗಾಂಧಿ ಅವರು ಸಾವರ್ಕರ್ ಅಲ್ಲದ ಕಾರಣ ಕ್ಷಮೆ ಕೇಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದ್ರೆ, ನನ್ನ ತಾತ ಸಾವರ್ಕರ್ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸುವ ದಾಖಲೆಗಳನ್ನು ತೋರಿಸಲು ನಾನು ಅವರಿಗೆ ಸವಾಲು ಹಾಕುತ್ತೇನೆ' ಎಂದು ಹೇಳಿದ್ದಾರೆ.