ನನ್ನನ್ನು ಹಿಂದೂ ಹುಲಿ ಅಂತ ಕರೆಯಬೇಕೇ ವಿನಃ ಮುಲ್ಲಾ ಅಂತಲ್ಲ: ಸಿ ಟಿ ರವಿ

ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರನ್ನು ಹಾಕಿ ಕಾಂಗ್ರೆಸ್ ಟ್ವೀಟ್ ಮಾಡ್ತಿರೋ ವಿಚಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದರು. 'ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ರೆ ಕಾಂಗ್ರೆಸ್ನವರು ಖಂಡಿತ ಕರೆಯಲಿ. ನನ್ನ ಸ್ವಭಾವ ಕುಂಕುಮ ಕಂಡರೆ ಆಗದಿದ್ರೆ, ಮುಲ್ಲಾಗಳ ಮೇಲೆ ಪ್ರೀತಿ ಜಾಸ್ತಿ ಇದ್ರೆ ಖಂಡಿತ ಕರೆಯಬಹುದು. ನನ್ನ ಮುಲ್ಲಾ ಅಂತ ಕರೆಯೊಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ ಎಂದರು