ನಮಗೆ ಸಚಿವ ಸ್ಥಾನ ಸಿಗುತ್ತೆ, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಂಬಿಕೆ ಇದೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಮೇಲೆ ನಮಗೆ ನಂಬಿಕೆ ಇದೆ. ಹಾಗಾಗಿ ಸದನಕ್ಕೆ ಹಾಜರಾಗುತ್ತಿದ್ದೇವೆ. ನಮ್ಮ ಮೇಲೆ ಬಂದಿದ್ದ ಆರೋಪ ಬಗ್ಗೆ ಕ್ಲೀನ್ ಚಿಟ್ ಸಿಕ್ಕಾಗಿದೆ. ಕ್ಲೀನ್ ಚಿಟ್ ಸಿಕ್ಕರೂ ಯಾಕೆ ಇನ್ನೂ ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಎಂದು ಜನರು, ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಇಂದು ರಹಸ್ಯ ಮಾತುಕತೆ ನಡೆಸಿದ್ದು, ಬಳಿಕ ಇಂದು ಸದನಕ್ಕೆ ಹಾಜರಾಗಿದ್ದಾರೆ.