ನಮ್ಮ ಕ್ಲಿನಿಕ್‌‌ಗೆ ಇಂದು ಸಿಎಂ ಬೊಮ್ಮಾಯಿ ಚಾಲನೆ

ನಮ್ಮ ಕ್ಲಿನಿಕ್‌‌ಗೆ ಇಂದು ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌‌‌ಗಳು ಏಕಕಾಲಕ್ಕೆ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲಾ ಕ್ಲಿನಿಕ್‌ಗಳು ಕಾರ್ಯನಿರ್ವಹಿಸಲಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯಚರಣೆ ಮಾಡಲಿವೆ.