ಸಿಎಂ ಆಗಲು 25 ವರ್ಷ ಆಗಿರಬೇಕು ಮತ್ತು ತಲೆ ಸರಿಯಿರಬೇಕು. ನಮ್ಮ ಪಕ್ಷದ ಸಿಎಂ ನಿರ್ಧರಿಸೋಕೆ ಮಾಜಿ ಸಿಎಂ ಕುಮಾರಸ್ವಾಮಿಯಾರು ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಪ್ರಶ್ನೆ ಮಾಡಿದರು. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅಂಡಗಿ ಗ್ರಾಮದಲ್ಲಿ ಮಾತನಾಡಿ, ನಮ್ಮ ಪಕ್ಷದ ಬಗ್ಗೆ ಮಾತನಾಡಲು ಹೆಚ್.ಡಿ. ಕುಮಾರಸ್ವಾಮಿಗೆ ಯಾವ ನೈತಿಕತೆಯಿದೆ? ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು. ಕುಮಾರಸ್ವಾಮಿ ಸಿಡಿ ಬಿಡುವುದಾಗಿ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಪ್ರತ್ರಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಹೇಳೋಕೆ ಹೋದ್ರೆ ಬೇಕಾದಷ್ಟು ಇದೆ. ತಾಜ್ ವೆಸ್ಟೆಂಡ್ ಹೋಟೆಲ್ ಯಾತ್ರೆ ನೋಡಿದ್ರೆ ಬೇಕಾದಷ್ಟು ಆಗುತ್ತೆ. ತನ್ನ ಚಟ ಬಿಟ್ಟು ಗಾಂಧೀಜಿ ಬೇರೆಯವರಿಗೆ ಹೇಳಿದರಂತೆ, ಅದೇ ರೀತಿ ಮೊದಲು ಇವರಿಗೆ ಇರುವ ಚಟ ಬಿಡಲಿ ಎಂದು ಬಿ.ಸಿ.ಪಾಟೀಲ್ ಕಿಡಿಕಾರಿದರು.
55% ಸಿಬ್ಬಂದಿ ಕೊರತೆ ಇರೋದು ನಿಜ
ಇನ್ನು ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿ, ಕೆ.ಪಿ.ಎಸ್.ಸಿ ಮೂಲಕ ಸದ್ಯ ಸಿಬ್ಬಂದಿ ನೇಮಕ ಕಾಲ್ ಫಾರ್ ಆಗುತ್ತೆ. 6000 ಡಿಪ್ಲೊಮಾ ಅದವ್ರನ್ನ ಹೊರಗುತ್ತಿಗೆ ಮೇಲೆ ತಗೊಳೋಕೆ ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಗಳಲ್ಲಿ ಅನುಮತಿ ಕೇಳಿದ್ದೇವೆ. ಅನುಮತಿ ಸಿಕ್ಕ ತಕ್ಷಣ ಮಾಡಲಿದ್ದೇವೆ. 55% ಸಿಬ್ಬಂದಿ ಕೊರತೆ ಇರೋದು ನಿಜ ಎಂದು ಬಿ.ಸಿ ಪಾಟೀಲ್ ತಿಳಿಸಿದರು.