ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಟಿಕೆಟ್‌ ದರ ಕೇವಲ 30 ರೂ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಟಿಕೆಟ್‌ ದರ ಕೇವಲ 30 ರೂ.

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ ಸಿಎಲ್‌ ನಿಂದ ಸಿಹಿ ಸುದ್ದಿ ನೀಡಿದೆ. ಜನವರಿ 26ರ ಗಣರಾಜ್ಯೋತ್ಸವ ಪ್ರಯುಕ್ತ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ರಾತ್ರಿ 08 ಗಂಟೆವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು 30ರೂ.

ಮಾತ್ರ ಟಿಕೆಟ್ ದರ ನಿಗದಿಪಡಿಸಲಾಗಿದೆ. ಜೊತೆಗೆ ಜನವರಿ 26ರ ಗುರುವಾರ ಫಲಪುಷ್ಟ ಪ್ರದರ್ಶನ ಕಣ್ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ. ಅಂದು ಶೋ ನೋಡಲು ಬರುವ ಜನರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ಪೇಪರ್ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಿದೆ.

ಗುರುವಾರ ಬೆಳಿಗ್ಗೆ 10 ರಿಂದ ರಾತ್ರಿ 8 ರ ನಡುವೆ ಲಾಲ್‌ಬಾಗ್‌ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಕೇವಲ 30 ರೂ ದರದ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು. ಹಾಗೂ ಗುರುವಾರ ಮಾತ್ರ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಲಾಲ್‌ಬಾಗ್‌ನಲ್ಲಿ, ಟಿಕೆಟ್‌ಗಳು ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತವೆ.