ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಸವಕಲ್ಯಾಣ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನಾನು ಈ ಹಿಂದೆ ಸಾಲಮನ್ನಾ ಮಾಡಿದಾಗ ತಾಂತ್ರಿಕ ಸಮಸ್ಯೆಯಿಂದ ಬಾಕಿ ಇರುವ ರೈತರ ಸಾಲವನ್ನು ನಾನು ಮನ್ನಾ ಮಾಡುತ್ತೇನೆ.

ಬಹುಮತದ ಸರ್ಕಾರ ಬಂದ್ರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಭೂಮಿ ಇಲ್ಲದ ಕಾರ್ಮಿಕರಿಗೆ ಕೂಡ ಅನೇಕ ತರಬೇತಿಗಳನ್ನು ನೀಡಿ ಅವರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಸೈಯದ್ ಯಶ್ರಬ್ ಅಲಿ ಖಾದ್ರಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.