ನಮ್ಮ ಧರ್ಮ ಉಳಿಸುವುದಕ್ಕಾಗಿ ಕಾಯ್ದೆ ಜಾರಿ ಅನಿವಾರ್ಯ ಎಂದ ಕೆಎಸ್ ಈಶ್ವರಪ್ಪ

ನಮ್ಮ ಧರ್ಮ ಉಳಿಸುವುದಕ್ಕಾಗಿ ಕಾಯ್ದೆ ಜಾರಿ ಅನಿವಾರ್ಯ ಎಂದ ಕೆಎಸ್ ಈಶ್ವರಪ್ಪ

ಬೆಳಗಾವಿ: ಧಮ್ ತೋರಿಸುವುದು ಚುನಾವಣೆಗಳಲ್ಲಿ ಅಲ್ಲ. ಜನರ ಮನಸು ಗೆಲ್ಲುವ ವಿಚಾರದಲ್ಲಿ ತೋರಿಸಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಕೆಎಸ್ ಈಶ್ವರಪ್ಪ, ಇಂತಹ ಪದಗಳನ್ನು ಸಿದ್ದರಾಮಯ್ಯ ಬಳಸಬಾರದು ಎಂದರು. ಮತಾಂತರ ಕಾಯ್ದೆ ಪ್ರಶ್ನೆ ಮಾಡಲು ಕಾಂಗ್ರೆಸ್ನವರು ಯಾರು.

ಕಾಯ್ದೆ ತಂದೆ ತರುತ್ತೇವೆ, ನಮ್ಮದೇ ಸರ್ಕಾರ ಇದೆ. ವಿರೋಧ ಪಕ್ಷದಲ್ಲಿ ಇರೋದಕ್ಕೆ ಮಾತ್ರ ವಿರೋಧಿಸುತ್ತಾರೆ. ನಮ್ಮ ಧರ್ಮ ಉಳಿಸುವುದಕ್ಕಾಗಿ ಕಾಯ್ದೆ ಜಾರಿ ಅನಿವಾರ್ಯವಾಗಿದೆ. ಪಾಕಿಸ್ತಾನದಲ್ಲಿ ಆದಂತೆ ಅಗಲು ಬಿಡುವುದಿಲ್ಲ ಅಂತ ಈಶ್ವರಪ್ಪ ಹೇಳಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿ 6ರಿಂದ 11ಕ್ಕೆ ಏರಿದೆ. ಕಾಂಗ್ರೆಸ್ 3, ಜೆಡಿಎಸ್ನಿಂದ 2 ಕಸಿದುಕೊಂಡು ಗೆದ್ದಿದ್ದೇವೆ ಎಂದು ಬೆಳಗಾವಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಸೋತರೂ ಮೀಸೆ ಮಣ್ಣಾಗಿಲ್ಲ ಅಂತಾರೆ ಕಾಂಗ್ರೆಸ್‌ನವರು. ಸೋತರೂ ಕಾಂಗ್ರೆಸ್ ಪಕ್ಷವೇ ಗೆದ್ದಿದೆ ಅನ್ನೋದು ಎಷ್ಟು ಸರಿ. ಬೆಳಗಾವಿ ಸೋಲಿಗೆ ಕಾರ್ಯಕರ್ತರೇ ಹೊಣೆ ಹೊರಬೇಕು. ಸೋಲು ಗೆಲುವಿಗೆ ಬಿಜೆಪಿ ಕಾರ್ಯಕರ್ತರೇ ಕಾರಣ ಅಂತ ಅಭಿಪ್ರಾಯಪಟ್ಟರು.