ನವದೆಹಲಿ: ಸಿಸೋಡಿಯಾ ಸಿಬಿಐ ಕಸ್ಟಡಿ 2 ದಿನ ವಿಸ್ತರಣೆ

ನವದೆಹಲಿ: ಸಿಸೋಡಿಯಾ ಸಿಬಿಐ ಕಸ್ಟಡಿ 2 ದಿನ ವಿಸ್ತರಣೆ

ವದೆಹಲಿ: ದೆಹಲಿ ನ್ಯಾಯಾಲಯವು ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಸಿಬಿಐ ಕಸ್ಟಡಿಯನ್ನು 2 ದಿನಗಳವರೆಗೆ ವಿಸ್ತರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಅವರು ಮಾರ್ಚ್ 10 ಕ್ಕೆ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಗೊಳಿಸಿದ್ದಾರೆ.

ಸಿಬಿಐ ಮತ್ತೆ ಮತ್ತೆ ಅದೇ ಪ್ರಶ್ನೆಗಳನ್ನು ಕೇಳುತ್ತಿದೆ ಮತ್ತು ಇದರಿಂದ ನನಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಎಎಪಿ ನಾಯಕ ಸಿಸೋಡಿಯಾ ನ್ಯಾಯಾಲಯಕ್ಕೆ ವಿವರಿಸಿದರು ಎಂಟರಿಂದ ಒಂಬತ್ತು ಗಂಟೆಗಳ ಕಾಲ ಕುಳಿತುಕೊಂಡು ಮತ್ತೆ ಮತ್ತೆ ಅದೇ ಪ್ರಶ್ನೆಗಳಿಗೆ ಉತ್ತರಿಸುವುದು ಮಾನಸಿಕ ಕಿರುಕುಳ ಎಂದು ತಿಳಿಸಿದ್ದಾರೆ.

ಸಿಸೋಡಿಯಾ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ನ್ಯಾಯಾಲಯ ಸಿಬಿಐಗೆ ಸೂಚಿಸಿದೆ. ಫೆಬ್ರವರಿ 26 ರಂದು ಕೇಂದ್ರ ತನಿಖಾ ಸಂಸ್ಥೆ ಸಿಸೋಡಿಯಾ ಅವರನ್ನು ಬಂಧಿಸಿತ್ತು.