ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬ: ಪುರಾಣ ಪ್ರಸಿದ್ಧ ಗೋಕರ್ಣ ದೇವಸ್ಥಾನಕ್ಕೆ ಹರಿದು ಬಂದ ಭಕ್ತರು

ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬ: ಪುರಾಣ ಪ್ರಸಿದ್ಧ ಗೋಕರ್ಣ ದೇವಸ್ಥಾನಕ್ಕೆ ಹರಿದು ಬಂದ ಭಕ್ತರು

ತ್ತರಕನ್ನಡ: ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಸಡಗರ ಜೋರಾಗಿದೆ. ಪುರಾಣ ಪ್ರಸಿದ್ಧ ಗೋಕರ್ಣ ದೇವಸ್ಥಾನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಜನ ಸಾಗರ ಕಂಡುಬಂದಿದೆ.

ಮಹಾಬಲೇಶ್ವರ ದೇಗುಲದ ಆತ್ಮಲಿಂಗ ದರ್ಶನ ಪಡೆಯಲು ಭಕ್ತು ಆಗಮಿಸುತ್ತಿದ್ದಾರೆ. ರಾಜ್ಯ ಹಾಗೂ ಹೊ ರಾಜ್ಯಗಳಿಂದ ಭಕ್ತಗಣ ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಆತ್ಮಲಿಂಗ ದರ್ಶನ ಪಡೆದು ಭಕ್ತರು ಪುನೀತಾರಾಗಿದ್ದಾರೆ.

ಇತ್ತ, ಕೋಲಾರದ ಕೋಟಿಲಿಂಗೇಶ್ವರ ದೇಗುಲಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಕೋಲಾರದ ಕೆಜಿಎಫ್‌ ತಾಲೂಕಿನ ಕಮ್ಮಸಂದ್ರದಲ್ಲಿರುವ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಏಕಕಾಲಕ್ಕೆ ಕೋಟಿ ಶಿವಲಿಂಗಗಳ ದರ್ಶನ ಪಡೆಯುವ ಕ್ಷೇತ್ರವಾಗಿದ್ದು, ಆಂಧ್ರ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ದೇವರಿಗೆವಿಶೇಷ ಪೂಜೆ ಪುನಸ್ಕಾರವನ್ನು ಸಲ್ಲಿಸುವ ಮೂಲಕ ಪಾತ್ರರಾಗುತಿದ್ದಾರೆ.