ನಾನಾಗಲೇ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ: ಶಾಸಕ ಅರವಿಂದ ಬೆಲ್ಲದ

ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗುವ ಆಸೆ ಇದ್ದೆ ಇರುತ್ತದೆ. ಆದರೆ ನಾನಾಗಲೇ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ. ಬದಲಾಗಿ ಪಕ್ಷ ಗುರುತಿಸಿ ಜವಾಬ್ದಾರಿ ನೀಡಿದರೆ ಸ್ವೀಕರಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆ ಕುರಿತು ನನಗೆ ಮಾಹಿತಿ ಇಲ್ಲ. ಹಾಗೇನಾದರೂ ಸಂಪುಟ ವಿಸ್ತರಣೆ ಆದರೆ ನಾನು ಸಚಿವ ಸ್ಥಾನ ಕೇಳುವುದಿಲ್ಲ. ಈಗಾಗಲೇ ನಾನು ಶಾಸಕನಾಗಿ, ಜಿಲ್ಲಾಧ್ಯಕ್ಷನಾಗಿ ನೆಮ್ಮದಿಯಿಂದ ಇರುವೆ. ಹಾಗೇನಾದರೂ ಪಕ್ಷ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ ಎಂದರು.