ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಉಡುಪಿ: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇ ಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು.
ಕೆಲ ದಿನಗಳ ಹಿಂದಷ್ಟೇ ಸಚಿವ ವಿ. ಸುನೀಲ್ ಕುಮಾರ್ ಅವರು ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರ ಜತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ನಿಗಮ ಸ್ಥಾಪನೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ನೀಡಿದ ಭರವಸೆ ಈಗ ಕಾರ್ಯ ರೂಪಕ್ಕೆ ಬಂದಿದೆ.
ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಇದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.
ವಿ ಸುನೀಲ್ ಕುಮಾರ್, ಇಂಧನ ಮತ್ತು ಕನ್ನಡ ಸಂಸ್ಕ್ರತಿ ಸಚಿವರು