ನಾರಾಯಣಗೌಡ ಬಣದ 12 ಮಂದಿ ಕರವೇ ಕಾರ್ಯಕರ್ತರ ವಿರುದ್ಧ FIR

ನಾರಾಯಣಗೌಡ ಬಣದ 12 ಮಂದಿ ಕರವೇ ಕಾರ್ಯಕರ್ತರ ವಿರುದ್ಧ FIR

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ 8 ರಿಂದ 12 ಮಂದಿ ಕಾರ್ಯಕರ್ತರ ವಿರುದ್ಧ FIR ದಾಖಲಿಸಲಾಗಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬೆಳಗಾವಿ ಪ್ರವೇಶಕ್ಕೆ ಅವಕಾಶ ಸಿಗದಕ್ಕೆ ಹಿರೇಬಾಗೇವಾಡಿ ಟೋಲ್‍ಗೇಟ್ ಬಳಿ ಕಲ್ಲು ತೂರಾಟ ನಡೆಸಲಾಗಿತ್ತು. ಮಹಾರಾಷ್ಟ್ರ ನೋಂದಣಿಯ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.