ನಾಲ್ಕು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ

ನಾಲ್ಕು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ

ವದೆಹಲಿ,ಮಾ.23- ವಿಧಾನಸಭೆಗೆ ಪ್ರಸಕ್ತ ವರ್ಷ ಚುನಾವಣೆ ಎದುರಿಸುತ್ತಿರುವ ರಾಜಸ್ಥಾನದ ಬಿಜೆಪಿ ಸೇರಿದಂತೆ ನಾಲ್ಕು ರಾಜ್ಯಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಸಮಿತಿ ಆದೇಶದ ಪ್ರಕಾರ ರಾಜಸ್ಥಾನಕ್ಕೆ ಲೋಕಸಭಾ ಸದಸ್ಯ ಸಿ.ಪಿ.ಜೋಶಿ ಮತ್ತು ಬಿಹಾರ ರಾಜ್ಯ ಬಿಜೆಪಿ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಸಾಮ್ರಾಟ್ ಚೌಧರಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.

ರಾಜಸ್ಥಾನ ಬಿಜೆಪಿಗೆ ಈವರೆಗೂ ಜೈಪುರದ ಅಂಬರ್ ಕ್ಷೇತ್ರದ ಶಾಸಕರಾಗಿರುವ ಸತೀಶ್ ಪೂನಿಯಾ ಅಧ್ಯಕ್ಷರಾಗಿದ್ದರು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಂತದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷರಾಗಿದ್ದ ವೀರೇಂದ್ರ ಸಚ್ದೇವ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮೇಲ್ದರ್ಜೆಗೆರಿಸಲಾಗಿದೆ. ಮಾಜಿ ಸಚಿವ ಮನಮೋಹನ್ ಸಮಾಲ್ ಅವರನ್ನು ಒಡಿಶಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.