ನಾಳೆ `KISF-PSI' ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಕೈಗಾರಿಕ ಭದ್ರತಾ ಪಡೆಯ (KSISF) 63 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿಗಳು ಸೇರಿದಂತೆ ಒಒಟ್ಟು 9,600 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇಲಾಖೆ ವೆಬ್ ಸೈಟ್ https://ksp.karnataka.gov.in ಗೆ ಭೇಟಿ ನೀಡಿ ಕರೆ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.