ನಾಳೆ ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ :ಕೇಂದ್ರರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ( ನ.18) ಉಡುಪಿಗೆ ಆಗಮಿಸಲಿದ್ದು, ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹೌದು, ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಉಡುಪಿಗೆ ಭೇಟಿ ನೀಡಲಿದ್ದು, ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ . ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.