ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀರ್ಪು; ಎಲ್ಲರ ಚಿತ್ತ ಸುಪ್ರೀಂ ನತ್ತ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ.23ರ ನಾಳೆ ನಡೆಯಲಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಈ ನಿಟ್ಟಿನಲ್ಲಿ ಕಾನೂನು ತಂಡಕ್ಕೆ ಸಹಕಾರ ನೀಡಲು & ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ & ಶಂಭುರಾಜ್ ದೇಸಾಯಿ ಅವರನ್ನು ನೇಮಕ ಮಾಡಿದೆ.