ನಾಳೆ ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ: ಹೀಗಿದೆ ಅವರ ಪ್ರವಾಸದ ವಿವರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ ಜನವರಿ 21ರಂದು ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲ್ಬುರ್ಗಿಗೆ ಆಗಮಿಸುವ ಅವರು ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು.
ಬಳಿಕ ಸಿಂಧಗಿಗೆ ತೆರಳುವ ಅವರು ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ನಂತರ ಅವರು ಕಲ್ಬುರ್ಗಿಯಿಂದ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ತಿಳಿಸಿದ್ದಾರೆ..0