ನಾಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಪ್ರಧಾನಿ ಭೇಟಿ; ಹಲವು ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ರೈಲು ನಿಲ್ದಾಣಕ್ಕೆ ಬರುವ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳಲ್ಲಿ ವ್ಯತ್ಯಯವುಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ರೈಲು ನಿಲ್ದಾಣಕ್ಕೆ ಬರುವ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳಲ್ಲಿ ವ್ಯತ್ಯಯವುಂಟಾಗಲಿದೆ.
ಹಲವು ರೈಲುಗಳ ಮಾರ್ಗಗಳನ್ನು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣ ಬದಲಾಗಿ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಬದಲಾಯಿಸಲಾಗಿದೆ. ಇನ್ನು ನಗರ ರೈಲು ನಿಲ್ದಾಣದಿಂದ ಹೊರಡಬೇಕಿದ್ದ ಹಲವು ರೈಲುಗಳು ಮಧ್ಯಾಹ್ನ 12 ಗಂಟೆಯ ಬಳಿಕ ಸಂಚರಿಸಲಿವೆ ಎಂದು ತಿಳಿದುಬಂದಿದೆ.
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.