ನಾಳೆ ದಾವಣಗೆರೆ ಜಿಲ್ಲಾಡಳಿತದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ನಾಳೆ ದಾವಣಗೆರೆ ಜಿಲ್ಲಾಡಳಿತದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ದಾವಣಗೆರೆ : ಜಿಲ್ಲಾಡಳಿತದ ವತಿಯಿಂದ ನವೆಂಬರ್ ನ.01 ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಜರುಗಲಿದೆ.

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಳಿಗ್ಗೆ 8.30ಕ್ಕೆ ಸರ್ಕಾರಿ ಬಾಲಕರ ಪ್ರೌಡಶಾಲಾ ಮೈದಾನದ ಆವರಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಗುವುದು. ಕಲಾ ತಂಡಗಳೊಂದಿಗೆ ಮೆರವಣಿಗೆಯು ಮಹಾನಗರಪಾಲಿಕೆ ಮುಂಭಾಗದಿಂದ ಗಾಂಧಿ ವೃತ್ತ, ಅಶೋಕ ರಸ್ತೆ, ಜಯದೇವ ವೃತ್ತ, ವಿದ್ಯಾರ್ಥಿ ಭವನದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದ ತಲುಪಲಿದೆ.

ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ವಹಿಸುವರು. ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕರಾದ ಡಾ.ವೈ.ಎ ನಾರಾಯಣಸ್ವಾಮಿ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ ಗೌರವಾನ್ವಿತ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಮೋಹನ್ ಕುಮಾರ್ ಕೊಂಡಜ್ಜಿ, ಎಸ್.ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಶಂಕರ್ ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯಕ, ಹಾಗೂ ಮಹಾನಗರಪಾಲಿಕೆಯ ಮಹಾಪೌರ ಆರ್.ಜನಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ ಸುರೇಶ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ.ಮುದ್ದಜ್ಜಿ, ಭಾಗವಹಿಸುವರು.

ಸಂಜೆ 06 ಗಂಟೆಗೆ ವಿದ್ಯಾನಗರದಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.