ನಾಳೆ ಬಳ್ಳಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ: ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ
ಬಳ್ಳಾರಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜ್ಯದಲ್ಲಿ ಮತ್ತೆ ಕಲಮ ಅರಳಿಸಲು ರಾಜ್ಯ ಹಾಗೂ ಕೇಂದ್ರ ನಾಯಕರು ಭರ್ಜರಿ ತಯಾರು ನಡೆಸುತ್ತಿದ್ದಾರೆ. ಹೀಗಾಗಿ ಕೇಂದ್ರ ನಾಯಕರು ರಾಜ್ಯಕ್ಕೆ ಆಗಾಗ ಭೇಟಿ ನೀಡುತ್ತಿದ್ದು, ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಈ ವೇಳೆ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ಬಳ್ಳಾರಿಗೆ ಅಮಿತ್ ಶಾ ಬರುವ ವೇಳಾಪಟ್ಟಿ ಈ ಕೆಳಗಿನಂತಿವೆ.
ಬೆಳಗ್ಗೆ 10:15ಕ್ಕೆ ವಾಯುಸೇನಾ ವಿಶೇಷ ವಿಮಾನದ ಮೂಲಕ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. 12:50ಕ್ಕೆ ಹುಬ್ಬಳ್ಳಿ ಏರ್ಪೋರ್ಟ್ ತಲುಪಲಿದ್ದಾರೆ. 12:55ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 1:25ಕ್ಕೆ ಸಂಡೂರು ಹೆಲಿಪ್ಯಾಡ್ ತಲುಪಲಿದ್ದಾರೆ.1:30 ಕ್ಕೆ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಸಾರ್ವಜನಿಕ ಸಮಾವೇಶದ ಸ್ಥಳಕ್ಕೆ ತೆರಳಲಿದ್ದಾರೆ.
ಮಧ್ಯಾಹ್ನ 1:30 ರಿಂದ 2:30 ರವರೆಗೆ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಸುಮಾರು 2 ಲಕ್ಷ ಜನರು ಸಮಾವೇಶದಲ್ಲಿ ಸೇರುವ ಸಾಧ್ಯತೆ ಇದೆ. ಹೀಗಾಗಿ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಿದ್ದಾರೆ.ಈಗಾಗಲೇ ಜಿಲ್ಲಾಡಳಿತ ಭರ್ಜರಿ ತಯಾರಿ ನಡೆಸಿದ್ದು, ನಗರದಲ್ಲಿ ಎತ್ತ ನೋಡಿದ್ರೂ ಕೆಸರಿಮಯವಾಗಿದೆ.