ನಾಳೆ ಬೆಳಗಾವಿಯಲ್ಲಿ 10 ಕೀಮಿ ವರೆಗೆ ರೋಡ್ ಶೋ ನಡೆಸುವ ಮೋದಿ: ಪ್ರಥಮ PUC ಪರೀಕ್ಷೆ ಮುಂದೂಡಿಕೆ
ಬೆಳಗಾವಿ: ನಾಳೆ ಬೆಳಗಾವಿಗೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆ ನಂತರ ಬೆಳಗಾವಿಯತ್ತ ಪ್ರಯಾಣ ಮಾಡಲಿದ್ದಾರೆ.
ನಂತರ ಬೆಳಗಾವಿಯಲ್ಲಿ 10 ಕೀಮಿ ವರೆಗೆ ರೋಡ್ ಶೋ ನಡೆಸಲಿದ್ದಾರೆ.
ಬೆಳಗಾವಿ ನಗರದ ಹಲವೆಡೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಿಪ್ಪಾಣಿಯಿಂದ ಖಾನಾಪುರ, ಗೋವಾಕ್ಕೆ ತೆರಳುವ ಮಾರ್ಗ ಬದಲಾವಣೆ ಮಾಡಲಾಗಿದ್ದು ಬಾಕ್ಸೈಟ್ ರಸ್ತೆ, ಹಿಂಡಲಗಾ ಗಣಪತಿ ದೇವಸ್ಥಾನ, ಶೌರ್ಯ ಸರ್ಕಲ್, ಕಾಂಗ್ರೆಸ್ ರಸ್ತೆ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಅನುದಾನಿತ, ಅನುದಾನ ರಹಿತ ಕಾಲೇಜುಗಳಿಗೆ ಪರೀಕ್ಷೆ ಮುಂದೂಡುವಂತೆ ಆದೇಶ ನೀಡಿದೆ. ಫೆ.27ರಂದು ನಡೆಯುವ ಪರೀಕ್ಷೆಯನ್ನ ಮಾರ್ಚ್ 6ರಂದು ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು ಬೆಳಗಾವಿ ಜಿಲ್ಲೆಯ ಪಿಯು ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ. ಬಸ್ ಸಂಚಾರ ವ್ಯತ್ಯಯ, ನಗರದಲ್ಲಿ ಎಲ್ಲೆಂದರಲ್ಲಿ ರೂಟ್ ಬದಲಾವಣೆ ಸೇರಿ ಸಕಾಲದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಮುಟ್ಟಲು ಆಗುವುದಿಲ್ಲ ಎಂದು ಪರೀಕ್ಷೆ ಮುಂದೂಡಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ.