ನಾಳೆ ಬೆಳಿಗ್ಗೆ 11.30ಕ್ಕೆ ಸಿಎಂ ಯಡಿಯೂರಪ್ಪ ಮಹತ್ವ ಸುದ್ದಿಗೋಷ್ಠಿ : ಮೇ.24ರ ನಂತ್ರ ಲಾಕ್ ಡೌನ್ ಫಿಕ್ಸ್.?

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ. ಸೋಂಕಿನ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮೇ.24ರವರೆಗೆ ಘೋಷಣೆಯಾಗಲಿರುವಂತ ಲಾಕ್ ಡೌನ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕೂಡ ಆಗಲಿದೆ ಎನ್ನಲಾಗುತ್ತಿದೆ. ಈ ಸಂಬಂಧ ನಾಳೆ ಬೆಳಿಗ್ಗೆ 11.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಲಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮೇ.24ರ ನಂತ್ರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತಂತೆ ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ಕೊರೋನಾ ಸೋಂಕಿನ 2ನೇ ಅಲೆ ವ್ಯಾಪಕವಾಗಿ ಹರುಡುತ್ತಿರುವ ಹಿನ್ನಲೆಯಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿರುವಂತ ರಾಜ್ಯದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ, ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಸಂವಾದರ ಮೂಲಕ, ಚರ್ಚೆ ನಡೆಸಿದರು. ಸಿಎಂ ಯಡಿಯೂರಪ್ಪ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಭೆಯ ನಂತ್ರ, ನಾಳೆ ಬೆಳಿಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ತುರ್ತು ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಇದಕ್ಕೂ ಮುನ್ನಾ ಎಲ್ಲಾ ಸಚಿವರೊಂದಿಗೆ ತಮ್ಮ ನಿರ್ಧಾರ ಕುರಿತಂತೆ ಚರ್ಚೆ ನಡೆಸಲಿರುವಂತ ಅವರು, ಈ ಬಳಿಕ ಸುದ್ದಿಗೋಷ್ಠಿಯಲ್ಲಿ ಕೊರೋನಾ ಕಂಟ್ರೋಲ್ ಕುರಿತಂತೆ ಮಹತ್ವದ ನಿರ್ಧಾರವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ. ಹೀಗಾಗಿ ನಾಳಿನ ಸಿಎಂ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ತೀವ್ರ ಕುತೂಹಲ ಕೆರಳಿಸಿದ್ದು, ಮೇ.24ರ ನಂತ್ರ ಲಾಕ್ ಡೌನ್ ಘೋಷಣೆ ಮುಂದುವರೆಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.