ನಾಳೆ ಮಹಾರಾಷ್ಟಕ್ಕೆ ಪ್ರಧಾನಿ ಮೋದಿ ಭೇಟಿ ; ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ಮೊದಲ ಭಾಗ ಉದ್ಘಾಟನೆ

ನಾಳೆ ಮಹಾರಾಷ್ಟಕ್ಕೆ ಪ್ರಧಾನಿ ಮೋದಿ ಭೇಟಿ ; ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ಮೊದಲ ಭಾಗ ಉದ್ಘಾಟನೆ

ವದೆಹಲಿ : ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇಯ 246-ಕಿಮೀ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಭಾನುವಾರ) ಉದ್ಘಾಟಿಸಲಿದ್ದಾರೆ.

ಹೊಸ ವಿಸ್ತರಣೆಯೊಂದಿಗೆ ರಾಷ್ಟ್ರ ರಾಜಧಾನಿಯಿಂದ ಜೈಪುರಕ್ಕೆ ಪ್ರಯಾಣದ ಸಮಯವನ್ನು ಐದು ಗಂಟೆಗಳಿಂದ ಸುಮಾರು ಮೂರೂವರೆವರೆಗೆ ಕಡಿಮೆ ಮಾಡಲಿದೆ.

ಇದನ್ನು ಬರೋಬ್ಬರಿ 12,150 ಕೋಟಿ ರೂ. ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಇಡೀ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿಗಳ ಕಚೇರಿ (PMO) ಹೇಳಿದೆ.

ಅದೇ ಸಮಯದಲ್ಲಿ ಮೋದಿಯವರು ದೌಸಾದಿಂದ 18,100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ನವ ಭಾರತದಲ್ಲಿ ಬೆಳವಣಿಗೆ, ಅಭಿವೃದ್ಧಿ ಮತ್ತು ಸಂಪರ್ಕದ ಎಂಜಿನ್‌ನಂತೆ ಅತ್ಯುತ್ತಮ ರಸ್ತೆ ಮೂಲಸೌಕರ್ಯಗಳ ನಿರ್ಮಾಣಕ್ಕೆ ಮೋದಿಯವರ ಒತ್ತು ದೇಶಾದ್ಯಂತ ನಡೆಯುತ್ತಿರುವ ಹಲವು ವಿಶ್ವ ದರ್ಜೆಯ ಎಕ್ಸ್‌ಪ್ರೆಸ್‌ ವೇಗಳ ನಿರ್ಮಾಣದಿಂದ ಸಾಕಾರಗೊಳ್ಳುತ್ತಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ.

ದೆಹಲಿ-ಮುಂಬೈ ಹೆದ್ದಾರಿ 1,386 ಕಿಮೀ ಉದ್ದವನ್ನು ಹೊಂದಿದ್ದು, ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ ವೇ ಆಗಿದೆ. ಇದು ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ 24 ಗಂಟೆಗಳಿಂದ 12 ಗಂಟೆಗಳವರೆಗೆ ಶೇ.50 ರಷ್ಟು ಕಡಿತಗೊಳಿಸುತ್ತದೆ.

ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಆರು ರಾಜ್ಯಗಳ ಮೂಲಕ ಹಾದುಹೋಗುತ್ತದೆ ಮತ್ತು ಕೋಟಾ, ಇಂದೋರ್, ಜೈಪುರ, ಭೋಪಾಲ್, ವಡೋದರಾ ಮತ್ತು ಸೂರತ್‌ನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ.