ನಾಳೆ ಯಾದಗಿರಿಗೆ ಪ್ರಧಾನಿ ಭೇಟಿ.. ಹುಣಸಗಿ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ನಾಳೆ ಯಾದಗಿರಿಗೆ ಪ್ರಧಾನಿ ಭೇಟಿ.. ಹುಣಸಗಿ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ನಾಳೆ ಪ್ರಧಾನಿ ನರೇಂದ್ರ ಮೋದಿ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಕೊಡೇಕಲ್ ಗ್ರಾಮದಲ್ಲಿ 4223 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಾಳೆ ಹುಣಸಗಿ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಸುರಪುರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಸರ್ಕರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ‌ ಆದೇಶ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ