ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ.ರವಿ, ನಾಳೆ ಬೆಳಿಗ್ಗೆ 10:30ಕ್ಕೆ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ.

ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿ.ಎಸ್.ಯಡಿಯೂರಪ್ಪ ಸೇರಿದಂತೆ 500ಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಲಿದ್ದಾರೆ ಎಂದರು.

ಪಕ್ಷ ಸಂಘಟನೆ, ರಾಜ್ಯ ನಾಯಕರ ಪ್ರವಾಸದ ಬಗ್ಗೆ ಸಮಾಲೋಚನೆ ನಡೆಯಲಿದೆ. ರಾಜ್ಯ ಹಾಗೂ ಕೇಂದ್ರಕ್ಕೆ ಸಂಬಂಧಿಸಿದ ವಿಚಾರಗಳು ಚರ್ಚೆಯಾಗಲಿವೆ. ದೇಶಕ್ಕೆ ರಾಜ್ಯದ ಕೊಡುಗೆ ಏನೆಂಬುದರ ಬಗ್ಗೆ ರೂಟ್ ಮ್ಯಾಪ್ ಸಂಬಂಧ ಪಕ್ಷದ ಅಜೆಂಡಾ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.